ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದಲ್ಲಿ ಭಾನುವಾರ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದವರಲ್ಲಿ 3 ಜನ ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಗಾಯಗೊಂಡವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.
ಬುಡ್ಡಪ್ಪ (40) , ದೇವದುರ್ಗ ಮೂಲದ ನಾಗಮ್ಮ(42), ಪುತ್ರ ಜ್ಯೋತಿ ಬಸವ (20) ಮೃತರು.
ಕ್ರೂಸರ್ ವಾಹನವು ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 5 ಜನ ಸ್ಥಳದಲ್ಲೇ ಮೃತಪಟ್ಟಿದ್ದು, 17 ಜನ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೂವರು ಮೃತಪಟ್ಟಿದ್ದಾರೆ.