ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದ ಬಸ್ಸು ಸಂಚಾರ ಸ್ಥಗಿತಗೊಂಡಿದ್ದರೆ ಇತ್ತ ನೌಕರರ ಜೀವನ ನಿರ್ವಹಣೆ ಗೆ ತೊಂದರೆಯಾಗದಂತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರ ವೇತನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಬಸ್ ನೌಕರರಿಗೆ 325 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದು ಏಪ್ರಿಲ್ ತಿಂಗಳ ಪೂರ್ಣ ಸಂಬಳ ಹಾಗೂ ಮೇ ತಿಂಗಳ ಶೇ. 50 ರಷ್ಟು ವೇತನವನ್ನು ನೀಡಲು ಹಣ ಬಿಡುಗಡೆ ಮಾಡಲಾಗಿದೆ.