Monday, August 8, 2022

Latest Posts

ಬಸ್ ಮುಖಾಮುಖಿ ಡಿಕ್ಕಿ: ಆರು ಮಂದಿ ಸಾವು, 10 ಮಂದಿಗೆ ಗಂಭೀರ ಗಾಯ

ಲಖನೌ: ಹಾರ್ಡೋಯ್ ರಸ್ತೆಯಲ್ಲಿ ಎರಡು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಹಾರ್ಡೋಯ್‌ನಿಂದ ಲಖನೌಗೆ ಬರುತ್ತಿದ್ದ ಬಸ್ ಹಾಗೂ ಲಖನೌ ಇಂದ ಹಾರ್ಡೋಯ್‌ಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಕೂಡ ಮೃತಪಟ್ಟಿದ್ದಾನೆ. ಎರಡೂ ಬಸ್ ವೇಗವಾಗಿ ಚಲಿಸುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss