ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಕಣ್ವ ಗ್ರೂಪ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯ ಜಾರಿ ನಿರ್ದೇಶಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಗ್ರಾಹಕರಿಂದ ಪಡೆದಿದ್ದ ಅಸಲು ಹಾಗೂ ಬಡ್ಡಿ ಹಣವನ್ನು ಹಿಂದಿರುಗಿಸದೆ ವಂಚನೆ ಎಸಗಿದ ಆರೋಪದಡಿ ಕಂಪೆನಿಯ ಎಂಡಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ.
ರಾಜಾಜಿನಗರದಲ್ಲಿ ಕಣ್ವ ಸಮೂಹ ಸಂಸ್ಥೆಗಳ ಕೇಂದ್ರ ಕಚೇರಿಯಿದ್ದು, ಸೌಹಾರ್ದ ಕೋಆಪರೇಟಿವ್ ಸೂಸೈಟಿಯನ್ನು ನಂಜುಡಯ್ಯ ಹೊಂದಿದ್ದಾರೆ. ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿದರೆ ಶೇ.12.5 ರಷ್ಟು ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಕಂಪೆನಿ ಬಳಿಕ ಅಸಲು ಹಾಗೂ ಬಡ್ಡಿ ಹಣ ನೀಡದೆ ವಂಚಿಸಿದ ಆರೋಪದಡಿ ಕಳೆದ ವರ್ಷ ನವೆಂಬರ್ ನಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲದಿನಗಳ ಹಿಂದೆಯಷ್ಟೇ ಕಣ್ವ ಗ್ರೂಪ್ ಐವರ ನಿರ್ದೇಶಕರ ಮನೆಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಮಹತ್ವದ ದಾಖಲಾತಿಯನ್ನು ವಶಕ್ಕೆ ಪಡೆದುಕೊಂಡಿದ್ದರು.