Wednesday, August 17, 2022

Latest Posts

ಬಹು ಭಾಷಾ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನ: ಸಚಿವ ಆನಂದ್ ಸಿಂಗ್ ಸಂತಾಪ

ಬಳ್ಳಾರಿ: ಬಹುಭಾಷಾ ಗಾಯಕ, 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿ, ಭಾರತೀಯ ಚಿತ್ರರಂಗದಲ್ಲೇ ದಾಖಲೆ ಬರೆದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ನಿಧನರಾದ ಹಿನ್ನೆಲೆ ಅರಣ್ಯ, ಪರಿಸರ, ಜೀವಶಾಸ್ತ್ರ ಖಾತೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚೇತರಿಸಿ ಬರಲಿದ್ದಾರೆ ಎನ್ನುವ ನಿರೀಕ್ಷೆಯಲ್ಲಿದ್ದ ದೇಶದ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದ್ದು, ಕಾಣದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ, ಅಭಿಮಾನಿಗಳಿಗೆ ದೇವರು ದುಖಃ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!