Friday, August 12, 2022

Latest Posts

ಬಾಗಲಕೋಟೆ‌| ಸಿಇಟಿ ಪರೀಕ್ಷೆ ಬರೆದ ಕೊರೋನಾ ಸೋಂಕಿತ ವಿದ್ಯಾರ್ಥಿ

ಬಾಗಲಕೋಟೆ: ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಓರ್ವ ಕೊರೋನಾ ಸೋಂಕಿತ ವಿದ್ಯಾರ್ಥಿ ಬರೆದಿದ್ದಾರೆ.
ಸೋಂಕಿತ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಮಾಡಲಾಗಿತ್ತು. ನವನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿತ್ತು.
ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರುವಲ್ಲಿ ಪಿಪಿಇ ಕಿಟ್, ಮಾಸ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೆ ಸುರಕ್ಷಿತ ಪಿಪಿಇ ಕಿಟ್ ವ್ಯವಸ್ಥೆ ಕೂಡ ಮಾಡಲಾಗಿತ್ತು ಎಂದು ಜಿಲ್ಲಾಧಿಕಾರಿ‌ ಕ್ಯಾ.ರಾಜೇಂದ್ರ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss