Wednesday, July 6, 2022

Latest Posts

ಬಾಗಲಕೋಟೆ: ಉಕ್ಕಿ ಹರಿಯುತ್ತಿರುವ ಕೃಷ್ಣ ನದಿ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ ಗೋವಿಂದ ಎಂ ಕಾರಜೋಳ

ಬಾಗಲಕೋಟೆ: ಜಮಖಂಡಿ‌ ತಾಲೂಕಿನ‌ ಚಿಕ್ಕಪಡಸಲಗಿಗೆ ಇಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ಉಕ್ಕಿ ಹರಿಯುತ್ತಿರುವ ಕೃಷ್ಣ ನದಿ , ಪ್ರವಾಹ ಪರಿಸ್ಥಿತಿ ಯನ್ನು ಪರಿಶೀಲಿಸಿದರು.

ಕಳೆದ ಮೂರು ದಿನಗಳಿಂದ‌ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಬಿಡುವಿಲ್ಲದೇ ಅಧಿಕಾರಿಗಳೊಂದಿಗೆ ಸಭೆ ನಡೆಸುವುದು, ಜಿಲ್ಲೆಯಲ್ಲಿ ಹರಿಯುತ್ತಿರುವ ಮೂರು ನದಿಗಳಿಂದ ಯಾವ್ಯಾವ ಗ್ರಾಮಗಳಿಗೆ ತೊಂದರೆಯಾಗುತ್ತಿದೆ, ಯಾವ ಗ್ರಾಮಗಳತ್ತ ನೀರು ವ್ಯಾಪಿಸುತ್ತಿದೆ‌. ಅಲ್ಲಿಯ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆತರು ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ತಿಳಿಸುತ್ತಿದ್ದಾರೆ. ಬುಧವಾರ ಮುಂಜಾನೆಯಿಂದ ಪ್ರವಾಹ ಪೀಡತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss