Sunday, July 3, 2022

Latest Posts

ಬಾಗಲಕೋಟೆ : ಜಿಲ್ಲಾಡಳಿತದಿಂದ ಸದ್ಭಾವನಾ ದಿನ ಆಚರಣೆ

ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಗುರುವಾರ ಸದ್ಭಾವನಾ ದಿನಾಚರಣೆ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಾತಿ, ಪ್ರದೇಶ, ಮತ ಅಥವಾ ಭಾಷೆಯ ಭೇಧ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು, ವೈಯಕ್ತಿಕವಾಗಿ ಆಗಲೀ ಅಥವಾ ಸಾಮೂಹಿಕವಾಗಿಯಾಗಲಿ, ನಮ್ಮಲ್ಲಿರುವ ಎಲ್ಲ ಭೇಧಭಾವ, ಹಿಂಸಾಚಾರಕ್ಕೆ ಅವಕಾಶ ನೀಡದೇ ಸಮಾಲೋಚನೆ ಹಾಗೂ ಸಂವಿಧಾನಾತ್ವಕ ಕ್ರಮಗಳ ಪರಿಹರಿಸುತ್ತೇವೆ ಎಂದು ಪ್ರತಿಜ್ಞೆಗೈಯಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ, ಉಪಕಾರ್ಯದರ್ಶಿ ಅಮರೇಶ ನಾಯಕ, ಕಂದಾಯ ಇಲಾಖೆಯ ಶಿರಸ್ತೆದಾರ ನಾಯ್ಕಲಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss