Saturday, August 13, 2022

Latest Posts

ಬಾಗಲಕೋಟೆ ಜಿಲ್ಲೆಯಲ್ಲಿ ಗೋವಾದಿಂದ ಆಗಮಿಸದ ವ್ಯಕ್ತಿಗೆ ಕೊರೋನಾ ಸೋಂಕು ದೃಢ

ಬಾಗಲಕೋಟೆ: ಬಾಗಲಕೋಟೆಯ ಲವಳೇಶ್ವರ ತಾಂಡಾದ 30 ವರ್ಷದ (ಬಿಜಿಕೆ-112) ವ್ಯಕ್ತಿಗೆ ಸೋಂಕು ಇರುವುದು ದೃಡಪಟ್ಟಿದೆ. ಕೋವಿಡ್ ದೃಢಪಟ್ಟ ವ್ಯಕ್ತಿ ಗೋವಾದಿಂದ ನೇರವಾಗಿ ಜಿಲ್ಲಾ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ಸದರಿ ವ್ಯಕ್ತಿಯ ಸ್ಯಾಂಪಲ್‍ನ್ನು ತೆಗೆಯಲಾಗಿ ಜಿಲ್ಲಾ ಕೋವಿಡ್ ಪರೀಕ್ಷಾ ಲ್ಯಾಬ್‍ನಲ್ಲಿ ಪರೀಕ್ಷೆ ಮಾಡಾಗಿತ್ತು. ಪರೀಕ್ಷೆಯಲ್ಲಿ ಕೋವಿಡ್ ಸೋಂಕು ಇರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ತಿಳಿದು ಬಂದಿದ್ದರಿಂದ ಖಚಿತಪಡಿಸಿಕೊಳ್ಳಲು ಬೆಂಗಳೂರಿಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಬೆಂಗಳೂರು ಪರೀಕ್ಷೆ ವರದಿಯಲ್ಲಿಯೂ ಪಾಜಿಟಿವ್ ದೃಡಪಟ್ಟಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ.
 ಒಂದು ವರ್ಷದ ಮಗು ಸೇರಿದಂತೆ ಇಬ್ಬರು ಕೋವಿಡ್‍ನಿಂದ ಗುಣಮುಖ
ಜಿಲ್ಲೆಯಲ್ಲಿ ಮತ್ತೆ ಒಂದು ವರ್ಷದ ಮಗು ಸೇರಿದಂತೆ ಇಬ್ಬರು ಕೋವಿಡ್ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಗುಣಮುಖರಾದವರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ನವನಗರದ ಸೆಕ್ಟರ್ ನಂ.10ರ 26 ವರ್ಷದ ಮಹಿಳೆ ಪಿ-5967 ಮತ್ತು 1 ವರ್ಷದ ಹೆಣ್ಣು ಮಗು ಪಿ-5966 ಕೋವಿಡ್‍ನಿಂದ ಗುಣಮುಖರಾದವರು. ಗುಣಮುಖರಾದವರು ಮಹಾರಾಷ್ಟ್ರ ರಾಜ್ಯದಿಂದ ಬಂದಿದ್ದು, ಅಲ್ಲಿನ ನಂಟಿನಿಂದ ಸೋಂಕು ದೃಢಪಟ್ಟಿತ್ತು. ಈಗ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ ಡಾ.ಚಂದ್ರಕಾಂತ ಜವಳಿ ಗುಣಮುಖರಾದವರಿಗೆ ಪ್ರಮಾಣ ಪತ್ರ ವಿತರಿಸಿದರೆ, ಆಸ್ಪತ್ರೆಯ ಸಿಬ್ಬಂದಿಗಳು ಕೈಗಳಿಗೆ ಸೀಲ್ ಹಾಕಿ ಚಪ್ಪಾಳೆ ತಟ್ಟಯವ ಮೂಲಕ ಬೀಳ್ಕೊಟ್ಟರು.
ಜಿಲ್ಲೆಯಿಂದ ಕಳುಹಿಸಲಾದ 187 ಸ್ಯಾಂಪಲ್‍ಗಳ ಪೈಕಿ 112 ನೆಗಟಿವ್ ವರದಿಯಾಗಿದ್ದು, 75 ಸ್ಯಾಂಪಲ್ ವರದಿ ಬರಬೇಕಾಗಿದೆ. ಪ್ರತ್ಯೇಕವಾಗಿ 570 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 9864 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 9629 ನೆಗಟಿವ್ ಪ್ರಕರಣ, 112 ಪಾಜಿಟಿವ್ ಪ್ರಕರಣ ಹಾಗೂ ಒಂದು ಮೃತ ಪ್ರಕರಣ ವರದಿಯಾಗಿರುತ್ತದೆ.
ಕೋವಿಡ್-19 ದಿಂದ ಒಟ್ಟು 93 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 20 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 13 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 3433 ಜನರನ್ನು ಬಿಡುಗಡೆ ಮಾಡಲಾಗಿದೆ. ಗುರುವಾರ ಜಿಲ್ಲೆಗೆ ಮತ್ತೆ ಒಬ್ಬರು ಮಹಾರಾಷ್ಟ್ರದಿಂದ, ಒಬ್ಬರು ಆಂದ್ರ ಪ್ರದೇಶದಿಂದ ಬಂದಿದ್ದು, ಮಹಾರಾಷ್ಟ್ರದಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್, ಆಂದ್ರ ಪ್ರದೇಶದಿಂದ ಬಂದವರನ್ನ ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss