Monday, August 8, 2022

Latest Posts

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾಗೆ ಮೂವರು ಗುಣಮುಖ 

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲ್ಲೂಕಿನ ಢಾಣಕಶಿರೂರ ಗ್ರಾಮದ ಓರ್ವ ಬಾಲಕಿ ಸೇರಿದಂತೆ ಮೂವರು ಕೋವಿಡ್ ನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಮನೆ ತಲುಪಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಇದುವರೆಗೆ ಗುಣ ಮುಖರಾದವರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ.ಢಾಣಕಶಿರೂರ ಗ್ರಾಮದ 16 ವರ್ಷದ ಬಾಲಕಿ ಪಿ-692, 47 ವರ್ಷದ ಪುರುಷ ಪಿ-684, 28 ವರ್ಷದ 0ುುವಕ ಪಿ-855 ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಗುಣಮುಖರಾದವರಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣ ಪತ್ರ ವಿತರಣೆ ಮಾಡಿದರು.ಇದರ ಜತೆಗೆ ಕೋವಿಡ್ದಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಆಸ್ಪತ್ರೆಯ ಸಿಬ್ಬಂದಿ,ವೈದ್ಯರು ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss