Wednesday, July 6, 2022

Latest Posts

ಬಾಗಲಕೋಟೆ ಜಿಲ್ಲೆಯಲ್ಲಿ ಶೇ.82 ರಷ್ಟು ಕೊರೋನಾದಿಂದ ಗುಣಮುಖ

ಬಾಗಲಕೋಟೆ: ಜಿಲ್ಲೆಯಲ್ಲಿ ಇಲ್ಲಿಯವರೆಗೆ ದೃಢಪಟ್ಟ 4807 ಕೊರೋನಾ ಸೋಂಕಿತರ ಪೈಕಿ 3949 ಜನ ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆಯಲ್ಲಿ ಶೇ.82ಕ್ಕೆ ಏರಿಕೆಯಾಗಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ 298 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 159 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕು 25, ಬಾದಾಮಿ 19, ಹುನಗುಂದ 36, ಬೀಳಗಿ 12, ಮುಧೋಳ 31, ಜಮಖಂಡಿ 31 ಹಾಗೂ ಬೇರೆ ಜಿಲ್ಲೆಯ 5 ಜನ ಇದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯ 658 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 576 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 47417 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 41648 ನೆಗಟಿವ್ ಪ್ರಕರಣ, 4807 ಪಾಸಿಟಿವ್ ಪ್ರಕರಣ ಹಾಗೂ 58 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 802 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 209 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 203 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8367 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬೀಳಗಿ ಪೊಲೀಸ್ ಠಾಣೆಯ ಎ.ಎಸ್.ಐ ಸಾವು 
ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಓರ್ವ ವ್ಯಕ್ತಿ ಆರೋಗ್ಯದಲ್ಲಿ ಸರಿ ಇಲ್ಲದ ಕಾರಣ ರಜೆಯ ಮೇಲೆ ತೆರಳಿದ್ದು, ಆಗಸ್ಟ 19 ರಂದು ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ. ಮೃತಪಟ್ಟ ವ್ಯಕ್ತಿಯ ಸ್ಯಾಂಪಲ್ ಪರೀಕ್ಷಿಸಲಾಗಿ ಪಾಸಿಟಿವ್  ದೃಢಪಟ್ಟಿರುತ್ತದೆ. ಇವರ ಅಗಲಿಕೆಯಿಂದ ಇಲಾಖೆಗೆ ತುಂಬಲಾರದಷ್ಟು ನಷ್ಟವಾಗಿದ್ದು, ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಾ, ಕುಟುಂಬದವರಿಗೆ ಸಿಗಬೇಕಾದ ಎಲ್ಲ ರೀತಿಯ ನೆರವನ್ನು ತಲುಪಿಸಲು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss