Thursday, August 18, 2022

Latest Posts

ಬಾಗಲಕೋಟೆ ಜಿಲ್ಲೆಯಲ್ಲಿ 144 ಹೊಸ ಕೊರೋನಾ ಪ್ರಕರಣ ಪತ್ತೆ, 2297ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 144 ಕೊರೋನಾ ಪ್ರಕರಣಗಳು ರವಿವಾರ ದೃಡಪಟ್ಟಿದ್ದು, ಇದರಿಂದ ಸೋಂಕಿತರ ಪ್ರಮಾಣ 2297ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 1162 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟ ಸೋಂಕಿತರ ಪೈಕಿ ಬಾಗಲಕೋಟೆ ತಾಲೂಕಿನಲ್ಲಿ 18, ಬಾದಾಮಿ 24, ಹುನಗುಂದ 35, ಬೀಳಗಿ 7, ಮುಧೋಳ 31, ಜಮಖಂಡಿ 28, ಬೇರೆ ಜಿಲ್ಲೆಯ 1 ಪ್ರಕರಣಗಳಿವೆ. ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 350 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 686 ಜನ ನಿಗಾದಲ್ಲಿದ್ದಾರೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 30552 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 27654 ನೆಗಟಿವ್ ಪ್ರಕರಣ, 2297 ಪಾಜಿಟಿವ್ ಪ್ರಕರಣ ಹಾಗೂ 50 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಕೋವಿಡ್-19 ದಿಂದ ಒಟ್ಟು 1162 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 1085 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 182 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 167 ಇದ್ದು, ಇನ್ಸ್ಟಿಟ್ಯೂಶನ್ ಕ್ವಾಂರಂಟೈನ್ನಲ್ಲಿದ್ದ 8297 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!