Thursday, August 11, 2022

Latest Posts

ಬಾಗಲಕೋಟೆ ಜಿಲ್ಲೆಯಲ್ಲಿ 149 ಹೊಸ ಪ್ರಕರಣಗಳು ದೃಢ, 48 ಜನ ಗುಣಮುಖ

ಬಾಗಲಕೋಟೆ: ಜಿಲ್ಲೆಯಲ್ಲಿ 48 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 149 ಕೊರೋನಾ   ಪ್ರಕರಣಗಳು ರವಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3060ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 1642 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ ದೃಢಪಟ್ಟ ಸೋಂಕಿತರ ಪೈಕಿ ಬಾದಾಮಿ ತಾಲೂಕು 35, ಬಾಗಲಕೋಟೆ 48, ಬೀಳಗಿ 4, ಹುನಗುಂದ 20, ಜಮಖಂಡಿ 15, ಮುಧೋಳ 22 ಹಾಗೂ ಬೇರೆ ಜಿಲ್ಲೆಯ 5 ಪ್ರಕರಣಗಳು ಕಂಡುಬಂದಿವೆ. 614 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 35054 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 31102 ನೆಗಟಿವ್ ಪ್ರಕರಣ, 3060 ಪಾಸಿಟಿವ್ ಪ್ರಕರಣ ಹಾಗೂ 55 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1367 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 182 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss