ಬಾಗಲಕೋಟೆ: ಜಿಲ್ಲೆಯಲ್ಲಿ ಮತ್ತೆ 80 ಜನ ಕೋವಿಡ್ನಿಂದ ಗುಣಮುಖರಾಗಿದ್ದು, ಹೊಸದಾಗಿ 57 ಕೊರೊನಾ ಪ್ರಕರಣಗಳು ಬುಧವಾರ ದೃಡಪಟ್ಟಿರುತ್ತವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಹೊಸದಾಗಿ ದೃಡಪಟ್ಟ ಪ್ರಕರಣಗಳಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 11, ಬಾದಾಮಿ 11, ಹುನಗುಂದ 5, ಬೀಳಗಿ 1, ಮುಧೋಳ 2, ಜಮಖಂಡಿ 21, ಬೇರೆ ಜಿಲ್ಲೆಯ 6 ಪ್ರಕರಣಗಳಿವೆ. ಹೊಸದಾಗಿ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ 34 ಕೆಮ್ಮು, ನೆಗಡಿ, ಜ್ವರದ ಲಕ್ಷಣದಿಂದ ಕೂಡಿವೆ. 80 ಜನ ಕೋವಿಡ್ ಚಿಕಿತ್ಸೆಯಿಂದ ಗುಣಮುಖರಾದವರನ್ನು ಬಿಡುಗಡೆ ಮಾಡಲಾಗಿದೆ.
ಕೋವಿಡ್-19 ದಿಂದ ಒಟ್ಟು 908 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 515 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 160 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 129 ಇದ್ದು, ಇನ್ಸ್ಟಿಟ್ಯೂಶನ್ ಕ್ವಾಂರಂಟೈನ್ನಲ್ಲಿದ್ದ 7343 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.