Tuesday, August 16, 2022

Latest Posts

ಬಾಗಲಕೋಟೆ ಮಾಸ್ಕ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ‌ ಕಾಲ್ನಡಿಗೆ ಜಾಗೃತಿ ಜಾಥಾ

ಬಾಗಲಕೋಟೆ: ಮಾಸ್ಕ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ‌ ಕಾಲ್ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.ಹಸಿರು ನಿಶಾನೆ‌ ತೋರುವ ಮೂಲಕ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಸಿಇಓ ಗಂಗೂಬಾಯಿ ಮಾನಕರ ಚಾಲನೆ ನೀಡಿದರು.
ಕಾಲ್ನಡಿಗೆ ಜಾಥಾದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಬಾಗಿಯಾಗಿದ್ದರು.
ಕೋವಿಡ್-19 ದಿಂದ‌ ದೂರವಿರಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.ಜಾಥಾದಲ್ಲಿ ಜಾಗೃತಿ ಫಲಕಗಳ ಪ್ರದರ್ಶನ ಮಾಡಲಾಯಿತು. ಜಿ.ಪಂ ಉಪ ಕಾರ್ಯದರ್ಶಿ ಎ.ಜಿ.ತೋಟದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಸೇರಿದಂತೆ ಇತರರು ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss