ಲಖನೌ: 28 ವರ್ಷಗಳ ಹಳೆಯ ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದ ತೀರ್ಪಿನಿಂದ 32 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರುವುದಾಗಿ ಮುಸ್ಲಿಂ ಸಮುದಾಯದ ನಾಯಕರು ಬುಧವಾರ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಬಾಬರಿ ಕ್ರಿಯಾ ಸಮಿತಿಯ ಸಂಚಾಲಕ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಜಫರ್ಯಾಬ್ ಜಿಲಾನಿ ನಾವು ಕೋರ್ಟ್ ತೀರ್ಪಿನಿಂದ ತೃಪ್ತರಾಗಿಲ್ಲ. ಆದ್ದರಿಂದ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದೇವೆ ಎಂದಿದ್ದಾರೆ. ಇದೇ ವೇಳೆ ಪ್ರಕರಣದ ತನಿಖೆಯನ್ನು ಮತ್ತೊಮ್ಮೆ ನಡೆಸುವಂತೆ ಸಿಬಿಐಗೆ ಕೋರಿಕೊಳ್ಳಲೂ ಸಂಘಟನೆ ತೀರ್ಮಾ ನಿಸಿರುವುದಾಗಿ ಅವರು ಹೇಳಿದ್ದಾರೆ.