ಗದಗ: 1992ರ ಬಾಬರಿ ಮಸೀದಿ ದ್ವಂಸ ಪ್ರಕರಣ ಪೂರ್ವ ನಿಯೋಜಿತವಲ್ಲ, ಅದೊಂದು ಆಕಸ್ಮಿಕ ಘಟನೆ ಎಂಬ ತೀರ್ಪು ನೀಡಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿನ ನಂಬಿಕೆಯನ್ನು ಗಟ್ಟಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಸತ್ಯ ನ್ಯಾಯ ನಿಷ್ಠೆ ರಾಮರಾಜ್ಯ ಸ್ಥಾಪನೆ ಪರಿಪಾಲನೆ ಹಾದಿಯಲ್ಲಿ ಸತ್ಯದ ತಳಹದಿಯ ಮೇಲೆ ನ್ಯಾಯದ ವಿಜಯವಾಗಿದೆ. ಭಾರತೀಯ ಜನತಾ ಪಕ್ಷದ ಭೀಷ್ಮ ಎಲ್.ಕೆ.ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ ಜೋಷಿ, ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮಾಜಿ ಸಂಸದರಾದ ವಿನಯ್ ಕಟಿಯಾರ್ ಅವರು ಸೇರಿದಂತೆ 32 ಜನರನ್ನು ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯವು ನಿರ್ದೋಷಿ ಎಂದು ಘೋಷಿಸಿದೆ. ಈ ಪ್ರಕರಣದ ತೀರ್ಪು ಸತ್ಯವನ್ನು ಎತ್ತಿ ಹಿಡಿದಿದ್ದು ಸ್ವಾಗತಾರ್ಹ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.