ಹೊಸ ದಿಗಂತ ಆನ್ ಲೈನ್ ಡೆಸ್ಕ್ :
ಜಮ್ಮು ಕಾಶ್ಮೀರದ ಬಾರಾಮುಲ್ಲಾದ ಸೊಪೋರ್ ಬಳಿ ಸಿಆರ್ಪಿಎಫ್ನ 179ನೇ ಬೆಟಾಲಿಯನ್ ಸ್ಥಳದ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ಮಾಡಿದ್ದು, ಗ್ರೆನೇಡ್ ಮುಖ್ಯದ್ವಾರದಲ್ಲೇ ಸ್ಫೋಟಗೊಂಡಿದೆ.
ಸಂಜೆ 7 ಗಂಟೆ ಸುಮಾರಿಗೆ ಈ ದಾಳಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.