Thursday, July 7, 2022

Latest Posts

ಬಾಲಿವುಡ್​ ನಿರ್ದೇಶಕ ಆಯುಷ್​​ ತಿವಾರಿ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ನಟಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್ :

ಬಾಲಿವುಡ್​ ನಿರ್ದೇಶಕ ಆಯುಷ್​​ ತಿವಾರಿಯಿಂದ ನಿರಂತರವಾಗಿ ಅತ್ಯಾಚಾರಕ್ಕೊಳಗಾಗಿರುವುದಾಗಿ ನಟಿಯೊಬ್ಬಳು ದೂರು ದಾಖಲಿಸಿದ್ದಾರೆ.
ನನಗೆ ಬಾಲಿವುಡ್​ ಸಿನಿಮಾ ಮತ್ತು ಧಾರವಾಹಿಗಳಲ್ಲಿ ಅವಕಾಶ ಕೊಡಿಸುವುದಾಗಿ ಆಯುಷ್​ ತಿವಾರಿ ಹೇಳಿದ್ದರು. ಅದೇ ಕಾರಣವನ್ನು ಇಟ್ಟುಕೊಂಡು ಎರಡು ವರ್ಷದ ಹಿಂದಿನಿಂದಲೂ ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಮದುವೆಯಾಗುವುದಾಗಿಯೂ ಹೇಳಿದ್ದರು. ಬಳಿಕ ತಾನು ಗರ್ಭಿಣಿ ಎಂದು ಗೊತ್ತಾದ ಬಳಿಕ ಮದುವೆ ಆಗಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ವರ್ಸೋವಾದ ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಠಾಕೂರ್, ಆರೋಪಿ ಮದುವೆ ಆಗುವುದಾಗಿ ನಂಬಿಸಿ, ಬಳಿಕ ನಿರಾಸಕರಿಸಿದ್ದಾರೆ ಎಂದು ನಟಿ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಸೆಕ್ಷನ್ 376 ಅಡಿಯಲ್ಲಿ ಆರೋಪಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಾಸ್ಟಿಂಗ್ ನಿರ್ದೇಶಕನ ಬಂಧನವಾಗಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss