Thursday, August 11, 2022

Latest Posts

ಬಾಲಿವುಡ್ ಡ್ರಗ್ಸ್ ಪ್ರಕರಣ: ದೀಪಿಕಾ ಪಡುಕೋಣೆ, ಸಾರ ಅಲಿಖಾನ್ ಫೋನ್ ಎನ್‌ಸಿಬಿ ವಶಕ್ಕೆ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಮತ್ತು ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಎನ್ ಸಿಬಿ ಮುಂದೆ ಹಾಜರಾಗಿದ್ದ ದೀಪಿಕಾ ಕಡುಕೋಣೆ ಮತ್ತು ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಅವರ ಪೋನ್ ಗಳನ್ನು ಎನ್ ಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶನಿವಾರ ಬೆಳಿಗ್ಗೆ ಎನ್ ಸಿಬಿ ಮುಂದೆ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ವಿಚಾರಣೆಗೆ ಹಾಜರಾಗಿದ್ದರು. ಸತತ ಆರು ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, ಡ್ರಗ್ಸ್ ವಿಷಯವಾಗಿ ಮೊಬೈಲ್ ನಲ್ಲಿ ಮಾಹಿತಿ ಇರುವ ಬಗ್ಗೆ ಅನುಮಾನ ಬಂದಿರುವ ಹಿನ್ನಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು, ದೀಪಿಕಾ, ಸಾರಾ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್‌, ಸಾರಾ ಅಲಿಖಾನ್‌ ಹಾಗೂ ರಕುಲ್‌ ಪ್ರೀತ್‌ ಸಿಂಗ್‌ ಅವರಿಗೆ ಇದೇ 23ರಂದು ಎನ್‌ಸಿಬಿ ಸಮನ್ಸ್ ಜಾರಿ ಮಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss