Saturday, June 25, 2022

Latest Posts

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ ಐ ಆರ್ ಗೆ ತುಮಕೂರು ನ್ಯಾಯಾಲಯ ನಿರ್ದೇಶನ

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಜೆಎಂಎಫ್‍ಸಿ ನ್ಯಾಯಾಲಯ ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿದೆ.
ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದ ವೇಳೆ ಟ್ವೀಟರ್​​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಬಾಲಿವುಡ್​​ ನಟಿ ಕಂಗನಾ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ತುಮಕೂರು ಕೋರ್ಟ್​ ಆದೇಶ ನೀಡಿದೆ.
ಪ್ರಕರಣ ದಾಖಲು ಮಾಡುವಂತೆ ವಕೀಯ ಎಲ್​ ರಮೇಶ್ ನಾಯ್ಕ್​ ಜೆಎಂಎಫ್​ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನ್ಯಾಯಾಧೀಶ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಸೆಕ್ಷನ್​ 156(3) ರ ಅಡಿ ದೂರು ದಾಖಲು ಮಾಡಿಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ಸೆಪ್ಟೆಂಬರ್​​ 21ರಂದು ನಟಿ ಕಂಗನಾ ರಣಾವತ್​​ ತಮ್ಮ ಟ್ವೀಟರ್​​ನಲ್ಲಿ ಕೃಷಿ ಮಸೂದೆ ಪ್ರತಿಭಟನೆ ವಿರೋಧವಾಗಿ ಟ್ವೀಟ್​ ಮಾಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss