Monday, August 15, 2022

Latest Posts

ಬಾಲಿವುಡ್ ನಟ ಅಮೀರ್ ಖಾನ್’ಗೂ ಕೊರೋನಾ ದೃಢ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಾಲಿವುಡ್ ನಟ ಅಮೀರ್ ಖಾನ್’ಗೂ ಕೊರೋನಾ ಸೋಂಕು ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ.

ಇತ್ತೀಚೆಗೆ ಅಮೀರ್ ಖಾನ್ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ಕೊರೋನಾ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಸ್ವತಃ ಅವರೇ ಮನೆಯಲ್ಲಿ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚೆಗೆ ತನ್ನ ಸಂಪರ್ಕದಲ್ಲಿದ್ದಂತವರು ಕೊರೋನಾ ಪರೀಕ್ಷೆಗೆ ಒಳಪಡುವಂತೆ ಅಮೀರ್ ಖಾನ್ ಮನವಿ ಮಾಡಿದ್ದಾರೆ. ಅವರು ಸಂಪೂರ್ಣ ಚೇತರಿಸಿಕೊಂಡ ನಂತರ ಲಾಲ್ ಸಿಂಗ್ ಚಡ್ಡಾ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ಅಮೀರ್ ಖಾನ್ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss