Sunday, September 25, 2022

Latest Posts

ಬಿಎಸ್‌ವೈ ಧಮ್ ಏನೆಂದು ತೋರಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಲ ಕಾಲಕ್ಕೂ ಅವರ ಧಮ್ ಏನೆಂಬುದನ್ನು ತೋರಿಸಿದ್ದಾರೆ. ಹಾಗಾಗಿ ಅವರು ಮತ್ತೆ ಮತ್ತೆ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಐದು ವರ್ಷ ಆಡಳಿತ ನಡೆಸಿದರೂ ಈಗ ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವಿಧಾನ ಪರಿಷತ್ ಟಿಕೆಟ್ ಸಿಗದ ವಿಚಾರದಲ್ಲಿ ವಿಶ್ವನಾಥ್ ಅವರೇ ಮುಖ್ಯಮಂತ್ರಿ ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಹಾಗಾಗಿ ಅದರ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಯಡಿಯೂರಪ್ಪ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿ ಆಗಿ ರಾಜ್ಯಕ್ಕೆ ಸಮರ್ಥ ಆಡಳಿತ ನೀಡುತ್ತಿದ್ದಾರೆ. ಕೇಂದ್ರದಿಂದ ಜಿಎಸ್‌ಟಿ ಹಣವನ್ನು ತಂದಿದ್ದಾರೆ ಎನ್ನುವ ಮೂಲಕ ಯಡಿಯೂರಪ್ಪ ಅವರಿಗೆ ಧಮ್ ಇಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ – ೧೯ ಚಿಕಿತ್ಸೆ ಕೊಡುವ ಬಗ್ಗೆ ಕೇಳಿಕೊಂಡಿದ್ದೇವೆ. ಎಲ್ಲ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯವರು ದರಪಟ್ಟಿ ನೀಡಿದ್ದಾರೆ. ಗುರುವಾರ ನಡೆಯಲಿರುವ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!