BIG NEWS | ಹಿಜಾಬ್ ವಿವಾದ: ಹೈಕೋರ್ಟ್ ನಿಂದ ನಾಳೆ ತೀರ್ಪು ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದ ಭಾರೀ ಸದ್ದು ಮಾಡಿದ್ದ ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.
ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಇತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 25ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ನಾಳೆ ತೀರ್ಪು ಪ್ರಕಟಿಸಲಿದೆ.
ಮಧ್ಯಂತರ ಆದೇಶ:
ಹಿಜಾಬ್ ನಿರ್ಬಂಧಿಸಿದ ಬಳಿಕ ರಾಜ್ಯದಲ್ಲಿ ಪ್ರತಿಭಟನೆ, ಗಲಭೆಗಳು ಉಂಟಾಗಿದ್ದವು. ಈ ವೇಳೆ ಹೈಕೋರ್ಟ್ ಕಾನೂನು ಸುವ್ಯವಸ್ಥೆ ನ್ಯಾಯಾಲಯ ಫೆ.10ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿತ್ತು. ಆದೇಶದಲ್ಲಿ, ಪ್ರಕರಣ ಇತ್ಯರ್ಥವಾಗುವವರೆಗೂ ಸಮವಸ್ತ್ರ ಸಂಹಿತೆ ಜಾರಿ ಮಾಡಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಚಿಹ್ನೆ ಹೊಂದಿರುವ ಉಡುಪು ಧರಿಸಿ ಹೋಗಬಾರದು ಎಂದು ಸ್ಪಷ್ಟಪಡಿಸಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!