Monday, August 8, 2022

Latest Posts

ಬಿಜೆಪಿಗೆ ನನ್ನ ಬೆಂಬಲ ಮುಂದುವರಿಯುತ್ತದೆ : ಶಾಸಕ ಎನ್.ಮಹೇಶ್

ಹೊಸದಿಗಂತ ವರದಿ ಮೈಸೂರು:

ಬಿಜೆಪಿ ಗೆ ನನ್ನ ಬೆಂಬಲ ಮುಂದುವರಿಯುತ್ತದೆ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಬಿಎಸ್ ಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಎನ್.ಮಹೇಶ್ ಹೇಳಿದರು.
ಸೋಮವಾರ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರ ಕ್ಕಾಗಿ ನಾನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತ್ರತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದೆ.
ಈಗಲೂ ನೀಡಿದ್ದೇನೆ. ಮುಂದೆ ಯೂ ನೀಡಿತ್ತೇನೆ ಎಂದು ತಿಳಿಸಿದರು. ಸಚಿವ ಸ್ಥಾನ ದ ಆಸೆ ಯಾರಿಗೆ ಇರುವುದಿಲ್ಲ, ಎಲ್ಲರಿಗೂ ಸಚಿವರಾಗುವ ಇರುತ್ತದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯ ಮಂತ್ರಿ ಗಳು ತೀರ್ಮಾನ ಮಾಡುತ್ತಾರೆ. ನನಗೆ ಸಚಿವ ಸ್ಥಾನ ನೀಡಿದರೆ, ಅದನ್ನು ದಕ್ಷತೆ, ಸಮರ್ಥವಾಗಿ ನಿಭಾಯಿಸುತ್ತೇನೆ, ನನಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂ ಗೆ ಸೇರಿದ್ದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss