Monday, August 15, 2022

Latest Posts

ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದ ತಿಳಿಸಿದ ಅಮಿತ್​ ಶಾ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನ ರಾಜಾ ರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದ್ದು, ಆರ್​ಆರ್​ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿದರೆ , ಶಿರಾದಲ್ಲಿ ಇದೇ ಮೊದಲ ಬಾರಿ ಕಮಲ ಅರಳಿದೆ.
ಈ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತದಾರರಿಗೆ ಕನ್ನಡದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ. ಅಲ್ಲದೇ ಈ ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ನಳೀನ್​ ಕುಮಾರ್​ ಕಟೀಲ್​ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss