Sunday, August 14, 2022

Latest Posts

ಬಿಜೆಪಿಗೆ ಬಿ’ಹಾರ’ ಮೋದಿ ಸಾಧನೆಗೆ ಸಂದ ಪುರಸ್ಕಾರ: ಪಾಸ್ವಾನ್ ಶಹಬಾಸ್ ಗಿರಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮೋದಿಯ ಮೇಲೆ ಜನರು ಇರಿಸಿದ ವಿಶ್ವಾಸವನ್ನು ಬಿಹಾರ ಚುನಾವಣೆಯಲ್ಲಿ ತೋರಿಸಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಯವರ ಗೆಲುವು ಎಂದು ಎಲ್‌ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಯಾವುದೇ ಮೈತ್ರಿ ಮಾಡಿಕೊಳ್ಳದೆ ಎಲ್‌ಜೆಪಿಯ ಎಲ್ಲ ಅಭ್ಯರ್ಥಿಗಳು ಚೆನ್ನಾಗಿಯೇ ಸೆಣಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಪಕ್ಷವನ್ನು ಬಲಪಡಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ಪಕ್ಷಕ್ಕೆ ಪ್ರಯೋಜನವಾಗಲಿದೆ’ ಎಂದು  ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಚಿರಾಗ್ ಜೆಡಿಯುವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಕ್ಷ ಎಲ್‌ಜೆಪಿ ಒಂದು ಸ್ಥಾನವನ್ನಷ್ಟೇ ಗೆಲ್ಲುವುದು ಸಾಧ್ಯವಾಗಿದೆ. ಆದಾಗ್ಯೂ, ನಮ್ಮ ಪಕ್ಷ ಅಧಿಕಾರಕ್ಕಾಗಿ ತಲೆ ಬಾಗಲಿಲ್ಲ ಎನ್ನಲು ಹೆಮ್ಮೆಪಡುತ್ತೇನೆ ಎಂದು ಹೇಳಿದ್ದಾರೆ.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss