Wednesday, August 10, 2022

Latest Posts

ಬಿಜೆಪಿಯವರೇ ಬೆಳಗಾವಿ ಮಧ್ಯವರ್ತಿ ಬ್ಯಾಂಕ್ ಅಧ್ಯಕ್ಷರು: ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ವಿಶ್ವಾಸ

ಬೆಳಗಾವಿ: ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಬಿಜೆಪಿಯವರೇ ಬೆಳಗಾವಿ ಮಧ್ಯವರ್ತಿ ಬ್ಯಾಂಕ್ ಅಧ್ಯಕ್ಷರಾಗುತ್ತಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಸಹಕಾರ ಕ್ಷೇತ್ರದಲ್ಲಿ ತನ್ನದೆಯಾದ ಕೊಡುಗೆ ನೀಡಿದೆ. ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಪಕ್ಷದ ವರಿಷ್ಠರ ಸೂಚನೆ ಮೆರೆಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುತ್ತಾರೆ. ಯಾರೇ ಅಧ್ಯಕ್ಷರಾದರೂ ಬಿಜೆಪಿಯವರೇ ಎಂದರು.
ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೂ ರಾಜ್ಯ ಸಭೆಯಲ್ಲಿ ಆಯ್ಕೆ ಮಾಡಿರುವುದಕ್ಕೆ ಸಂತಸವಾಗಿದೆ. ರಾಜ್ಯಸಭೆ ಎಂದರೆ ಬೇರೆ ಕಲ್ಪನೆ ಇತ್ತು. ಆದರೆ ಈಗ ಬದಲಾಗಿದೆ. ಬಿಜೆಪಿ ಪಾರಂಪರೆಯನ್ನು ಬೇರೆ ಪಕ್ಷದ ಕಾರ್ಯಕರ್ತರು ಕೇಳುತ್ತಿದ್ದಾರೆ ಎಂದರು.
ಬೆಳಗಾವಿ ಜಿಪಂ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ರಾಜ್ಯ ಸಭೆಯ ಅನುದಾನವನ್ನು ಸರಿಯಾಗಿ ಸದ್ಬಳಕೆಯಾಗದೆ ವಾಪಸ್ಸ ಹೋದ ಉದಾಹರಣೆ ಸಾಕಷ್ಟಿದೆ. ರಾಜ್ಯ ಸಭೆಗೆ ಯಾವ ಯಾವ ಇಲಾಖೆ ಒಳಪಡುತ್ತವೆ ಎಂಬುದನ್ನು ಅಧ್ಯಯನ ಮಾಡುತ್ತೇನೆ. ಬಳಿಕ ನನ್ನದೆಯಾದ ರೂಪರೇಷೆಗಳನ್ನು ಸಿದ್ದಪಡಿಸಿಕೊಂಡು ಎಲ್ಲರ ಸಹಕಾರದಿಂದ ಕರ್ನಾಟಕವನ್ನು ಅಭಿವೃದ್ಧಿ ಪತದತ್ತ ಕೊಂಡೊಯುವಲ್ಲಿ ಪ್ರಮುಖ ಪಾತ್ರ ವಹಿಸುವೆ ಎಂದರು.
ಪಕ್ಷದ ಹೈಕಮಾಂಡ್ ನನ್ನ ನಿರೀಕ್ಷೆ ಮೀರಿ ರಾಜ್ಯಸಭಾ ಸ್ಥಾನವನ್ನು ನೀಡಿ ಕಾರ್ಯಕರ್ತರಿಗೆ ಉತ್ತಮ ಸಂದೇಶ ರವಾನೆ ಮಾಡಿದೆ. ಕೇಂದ್ರ ಸಚಿವರಾಗಿ ಸುರೇಶ ಅಂಗಡಿ ಅವರು ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಂಡು ಕೆಲಸ ಮಾಡುತ್ತಿದ್ದಾರೆ‌. ಡಿಸಿಎಂ ಲಕ್ಷ್ಮಣ ಸವದಿ ಅವರೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಕೇಂದ್ರ ಸಚಿವನಾಗುವ ಬಯಕೆ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಐತಿಹಾಸಿಕ ಜಿಲ್ಲೆಯಾಗಿರುವ ಬೆಳಗಾವಿಗೆ ವಿಶೇಷ ಅನುದಾನ ತರಲು ಎಲ್ಲ ನಾಯಕರ ಸಹಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ನನಗೆ ರಾಜ್ಯಸಭಾ ಸ್ಥಾನ ಸಿಕ್ಕಿರುವುದರಿಂದ ಬೆಳಗಾವಿ ಜಿಲ್ಲೆಯ ಯಾವುದೇ ನಾಯಕರಿಗೂ ಅಸಮಾಧಾನವಾಗಿಲ್ಲ. ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಅವರು ನನಗೆ ಶುಭಾಶಯ ಕೋರಿದ್ದಾರೆ. ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಈರಣ್ಣಾ ಕಡಾಡಿ ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss