Tuesday, June 28, 2022

Latest Posts

ಬಿಜೆಪಿಯಿಂದ ಕುಂಬಳೆಯಲ್ಲಿ ನಡೆಯಿತು ನೇತಾಜಿ ಸುಭಾಷ್‌ಚಂದ್ರ ಬೋಸ್ ರ 125ನೇ ಜನ್ಮದಿನಾಚರಣೆ

ಹೊಸ ದಿಗಂತ ವರದಿ, ಕುಂಬಳೆ:

ಭಾರತದ ಸ್ವಾತಂತ್ರ‍್ಯ ಸಂಗ್ರಾಮದ ಹೋರಾಟಕ್ಕೆ ಹೊಸ ರೂಪ ಕೊಟ್ಟ ಮಹಾನಾಯಕ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆಯನ್ನು ಪರಾಕ್ರಮ ದಿನವನ್ನಾಗಿ ಭಾರತೀಯ ಜನತಾ ಯುವಮೋರ್ಚಾದ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಕುಂಬಳೆ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಯುವಮೋರ್ಚಾ ಮಂಡಲ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ ಇಚ್ಲಂಗೋಡು ವಹಿಸಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ ಕೆ.ವಿನೋದನ್ ಕಡಪ್ಪುರ, ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಅಧ್ಯಕ್ಷ ಕೆ.ಸುಧಾಕರ ಕಾಮತ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಜಯರಾಜ್, ಕಾರ್ಯಕರ್ತರಾದ ವೇಣು ಕಡಪ್ಪುರ, ವಸಂತಕುಮಾರ್ ಉಪಸ್ಥಿತರಿದ್ದರು. ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬಂಬ್ರಾಣ ಸ್ವಾಗತಿಸಿ, ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಕಾರ್ಯದರ್ಶಿ ಕೆ.ಸುಜಿತ್ ರೈ ವಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss