Sunday, August 14, 2022

Latest Posts

ಬಿಜೆಪಿಯಿಂದ ಮಾತ್ರ ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿ ಸಾಧ್ಯ: ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಬಿಜೆಪಿಯಿಂದ ಮಾತ್ರ ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿ ಸಾಧ್ಯ. ಇದನ್ನು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಜನಪರ ಕಾರ್ಯಗಳಿಂದ ಸಾಬೀತುಪಡಿಸಿವೆ‌. ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ ’ಸೇವೆಯೇ ಸಂಘಟನೆ’ ತತ್ತ್ವದಿಂದ ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪ್ರತಿಯೊಬ್ಬ ದುರ್ಬಲ ವ್ಯಕ್ತಿಯ ವಿಕಸನದಿಂದ ದೇಶದ ವಿಕಾಸ ಸಾಧ್ಯ. ಮೋರ್ಚಾಗಳು ವಿವಿಧ ಕಾರ್ಯಕ್ರಮಗಳ ಮೂಲಕ ಕ್ರಿಯಾಶೀಲತೆಯಿಂದ ಜವಾಬ್ದಾರಿ ನಿರ್ವಹಿಸಿದಾಗ ಪಕ್ಷ ಸಂಘಟನೆ ಸದೃಢವಾಗುವುದು. ನಮ್ಮ ಎಲ್ಲ ಆಲೋಚನೆಗಳು ಮತ್ತು ಚಿಂತನೆಗಳು ಪಕ್ಷ ಸಂಘಟನೆಗೆ ಪೂರಕವಾಗಿರಬೇಕು ಎಂದು ಅವರು ತಿಳಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸರಿಯಾದ ದಿಕ್ಕಿನಲ್ಲಿ ಪ್ರಾರಂಭಿಸಿದ ಎಲ್ಲ ಕಾರ್ಯಗಳು ಯಶಸ್ವಿಯಾಗುತ್ತವೆ ಎಂಬ ಮಾತಿನಂತೆ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಹುಮ್ಮಸ್ಸು ಮುಂದಿನ ಯಶಸ್ಸಿನ ಶುಭ ಸೂಚನೆ. ಪಕ್ಷದ ಸಂಸ್ಥಾಪಕರ ನಿಸ್ವಾರ್ಥ ಮತ್ತು ಸಮರ್ಪಣಾಭಾವದ ಸೇವೆ, ತ್ಯಾಗ, ಬಲಿದಾನದಿಂದ ಇಂದು ಬಿಜೆಪಿ ಕಾರ್ಯಕರ್ತರ ಸ್ವಾಭಿಮಾನದ ಸಂಕೇತವಾಗಿ ಬೆಳೆದು ನಿಂತಿದೆ. ಜನಸೇವೆ ಹಾಗೂ ಪಕ್ಷ ಸಂಘಟನೆಯ ಮೂಲಕ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲೆಯ ಒಂದು ಮಾದರಿ ಮೋರ್ಚಾವಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬುಬಕ್ಕರ್ ಮಾತನಾಡಿ, ಅಲ್ಪಸಂಖ್ಯಾತ ವರ್ಗದ ಮಹಿಳೆಯರಿಗೆ ದುಸ್ವಪ್ನವೆನಿಸಿದ್ದ ತ್ರಿವಳಿ ತಲಾಖ್ ಪದ್ಧತಿಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ದಿಟ್ಟ ಕ್ರಮ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಜನೋಪಯೋಗಿ ಯೋಜನೆಗಳ ನೆರವಿನಿಂದ ಅಲ್ಪಸಂಖ್ಯಾತರಿಗೆ ಬಿಜೆಪಿ ಪರ ಇರುವ ಭರವಸೆ ಇನ್ನಷ್ಟು ಹೆಚ್ಚಿದೆ. ಸರಕಾರದ ಯೋಜನೆಗಳನ್ನು ಅರ್ಹ ಲಾನುಭವಿಗಳಿಗೆ ತಲುಪಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುವುದಾಗಿ ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿದರು. ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಶೇಖ್ ಆಸ್‌ಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss