ಕಲಬುರಗಿ:
ಬಿಜೆಪಿ ಕೇವಲ ನಗರ ಕೇಂದ್ರಿತ ಪಕ್ಷ,ಮೇಲ್ವರ್ಗದವರ ಪಕ್ಷ ಎಂಬ ತಪ್ಪು ಕಲ್ಪನೆಯನ್ನು ದೂರಗೊಳಿಸಿ, ಬಿಜೆಪಿ ಸರ್ವ ಸ್ಪರ್ಶಿ-ಸರ್ವ ವ್ಯಾಪಿ ಎಂಬ ಮಾತನ್ನು ಸಾಬಿತು ಮಾಡಿ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲವು ಸಾಧಿಸಿದೆ. ಹೀಗಾಗಿ ಸಮಗ್ರ ರಾಷ್ಟ್ರದ ಅಭಿವೃದ್ಧಿಯನ್ನು ಸಕಾರಗೊಳಿಸುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ ಎಂದು ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸಂದೀಪಕುಮಾರ ಹೇಳಿದ್ದಾರೆ.
ಅವರು ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಒಟ್ಟು 45,246 (ಶೇ.52.04) ನಷ್ಟು ಬಿಜೆಪಿ ಬೆಂಬಲಿತ ಸದಸ್ಯರು ಗೆಲವು ಸಾಧಿಸಿದ್ದಾರೆ ಎಂದರು. ಒಟ್ಟು 5,670 ಗ್ರಾಮ ಪಂಚಾಯತಿಗಳಲ್ಲಿ 3,142 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಪಕ್ಷದ ಬೆಂಬಲಿತರು ಅಧಿಕಾರವನ್ನು ಗಳಿಸಿದ್ದಾರೆ. ಹೀಗಾಗಿ ರಾಷ್ಟ್ರದ ಸಮಗ್ರ ಅಭಿವೃದ್ದಯನ್ನು ಮಾಡುವ ಈ ದೇಶದಲ್ಲಿ ಪಕ್ಷವೆಂದರೆ ಅದು ಬಿಜೆಪಿ ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೂರದೃಷ್ಟಿಯ ಯೋಜನೆಗಳು, ಅಭಿವೃದ್ದಿಪರ ಚಿಂತನೆಯ ಅನುಷ್ಠಾನಕ್ಕೆ ಜನಮೆಚ್ಚುಗೆ ಲಭಿಸಿರುವುದು ಈ ಚುನಾವಣೆಯಲ್ಲಿ ಸ್ಪಷ್ಟವಾಗಿದೆ ಎಂದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ದೊರೆಯಬೇಕೆನುವ ತನ್ನ ಸಂಕಲ್ಪದೊಂದಿಗೆ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಹೀಗಾಗಿ ಅದರಂತೆ ನಡೆಯುತ್ತಿದೆ ಎಂದರು.
11ಕ್ಕೆ ಜನಸೇವಕ ಸಮಾವೇಶ
ಗ್ರಾಮ ಪಂಚಾಯತಿಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಪಕ್ಷದ ಕಾರ್ಯಕರ್ತರಿಗೆ ಈದೀಗ ಜನಸೇವಕ ಸಮಾವೇಶದ ಮೂಲಕ ಅಭಿನಂದನೆಗಳನ್ನು ಸಲ್ಲಿಸುವ ಮೂಲಕ ಇದೇ ತಿಂಗಳ 11ರಂದು ನಗರದಲ್ಲಿ ಬಿಜೆಪಿ ಜನಸೇವಕ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಮಾಹಿತಿ ನೀಡಿದರು. 11ರಂದು ಸೋಮವಾರ ಮದ್ಯಾಹ್ನ 3 ಗಂಟೆಗೆ ನಗರದ ಎನ್.ವ್ಹಿ.ಮೈದಾದ ಒಳಾಂಗಣ ಪ್ರದೇಶದಲ್ಲಿ ಜನಸೇವಕ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಸಮಾವೇಶಕ್ಕೆ ಸಚಿವರಾದ ಜಗದೀಶ ಶೆಟ್ಟರ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದ ಅವರು, ಬರುವಂತ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆಗಳಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಈ ಸಮಾವೇಶವನ್ನು ನಡೆಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಸಿದ್ದಾಜೀ ಪಾಟೀಲ, ಗ್ರಾಮೀಣ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಮಹಾ ನಗರ ಪ್ರಧಾನ ಕಾರ್ಯದರ್ಶಿ ಉಮೇಶ ಪಾಟೀಲ,ಮಹಾದೇಶ ಬೆಳಮಗಿ, ಸೂರಜ ತಿವಾರಿ, ವಿನಯ ವಲ್ಲ್ಯಾಪುರ ಸೇರಿದಂತೆ ಅನೇಕರು ಇದ್ದರು.