Wednesday, July 6, 2022

Latest Posts

ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಗೆಲುವಿಗೆ ಶ್ರಮಿಸಲು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕರೆ

ಚಿತ್ರದುರ್ಗ: ಇದೇ ತಿಂಗಳ 28 ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚಿದಾನಂದ್ ಎಂ.ಗೌಡ ಅವರ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ಬಿಜೆಪಿ ಜಿಲೆಯ್ಲ ಆಗ್ನೇಯ ಪದವೀಧರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧ ಅಕ್ಕಮಹಾದೇವಿ ಸಮಾಜದಲ್ಲಿ ಶನಿವಾರ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಕೊರೋನಾ ಸಂಕಷ್ಟದಲ್ಲಿ ಶಿಕ್ಷಕರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ವಿಶೇಷ ಕಾಳಜಿ ವಹಿಸಿದೆ. ಕಾರ್ಯಕರ್ತರು ಶ್ರಮ ವಹಿಸಿ ಕೆಲಸ ಮಾಡುವ ಮೂಲಕ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೇಳಿದರು.
ಶಿಕ್ಷಣ ಪ್ರೇಮಿಯಾಗಿರುವ ಶಿರಾದ ಚಿದಾನಂದ್ ಎಂ.ಗೌಡ ತಮ್ಮ ಸಂಸ್ಥೆಯಲ್ಲಿ ಸಾವಿರಾರು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ಅನೇಕ ಪದವೀಧರರನ್ನು ತಯಾರು ಮಾಡಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಳೆದ ಒಂದುವರೆ ವರ್ಷಗಳಿಂದಲೂ ಐದು ಜಿಲ್ಲೆಗಳ ೩೨ ವಿಧಾನಸಭಾ ಕ್ಷೇತ್ರಗಳಲ್ಲಿ ಸುತ್ತಾಡುತ್ತಿದ್ದಾರೆ. ಶಿರಾ ವಿಧಾನಸಭೆ ಉಪಚುನಾವಣೆಯಲ್ಲಿಯೂ ಅವರ ಪಾತ್ರ ಬಹಳಷ್ಟಿದೆ. ಬಿಜೆಪಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಳ್ಳೋಣ ಎಂದರು.
ವಿಧಾನ ಪರಿಷತ್ ಸದಸ್ಯ ಎ.ವೈ.ನಾರಾಯಣಸ್ವಾಮಿ ಮಾತನಾಡಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಲಕ್ಷ ಆರು ಸಾವಿರದ ಐದು ನೂರು ಮತದಾರರಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ೨೦ ಸಾವಿರ ಮತದಾರರು ಹೆಚ್ಚು ಸೇರ್ಪಡೆಯಾಗಿದ್ದಾರೆ. ಬಿಜೆಪಿ ಉಗಮ ಸ್ಥಾನ ಕ್ಷೇತ್ರವಿದು. ನನಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ ಇದಾಗಿರುವುದರಿಂದ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ್ ಎಂ.ಗೌಡರವರ ಗೆಲುವಿಗೆ ದಾರಿ ಸುಗಮವಾಗಲಿದೆ ಎಂದು ಭವಿಷ್ಯ ನುಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಚಿದಾನಂದ್ ಎಂ.ಗೌಡ ಮಾತನಾಡಿ, ಚಿತ್ರದುರ್ಗ ಜಿಲ್ಲೆಗೆ ನಾನು ಹೊಸಬನಲ್ಲ. ಅದಕ್ಕಾಗಿ ಈ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ನನ್ನನ್ನು ಗೆಲ್ಲಿಸಬೇಕು. ನಾನು ಜಯಶಾಲಿಯಾದಲ್ಲಿ ಶಿಕ್ಷಕರು, ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ನಿರುದ್ಯೋಗಿ ಪದವೀಧರರುಗಳಿಗೆ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಸರ್ಕಾರದ ಸವಲತ್ತುಗಳನ್ನು ಮನೆಬಾಗಿಲಿಗೆ ಮುಟ್ಟಿಸುವ ಚಿಂತನೆ ಇದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಜಯಪಾಲ್, ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದ್ರಿನಾಥ್, ಯುವ ಮೋರ್ಚ ಜಿಲ್ಲಾಧ್ಯಕ್ಷ ಹನುಮಂತೇಗೌಡ, ನಗರ ಮಂಡಲ ಅಧ್ಯಕ್ಷ ಜೆ.ಶಶಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿ ನಾಗರಾಜ್, ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ರೈತ ಮೋರ್ಚ ಮುಖಂಡರಾದ ಎಂ.ಎ.ಸೇತೂರಾಂ, ನಗರ ಕಾರ್ಯದರ್ಶಿ ಯಶವಂತ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss