Monday, August 8, 2022

Latest Posts

ಬಿಜೆಪಿ ಎಸ್.ಟಿ. ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ವೀರೇಂದ್ರ ಸಿಂಹ ನೇಮಕ

ಚಿತ್ರದುರ್ಗ: ಭಾರತೀಯ ಜನತಾ ಪಾರ್ಟಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ವೀರೇಂದ್ರ ಸಿಂಹರವರನ್ನು ನೇಮಿಸಿ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಕಾರಾಗೃಹಗಳ ಮುಖ್ಯಾಧೀಕ್ಷಕರಾಗಿ ಸೇವೆ ಸಲ್ಲಿಸಿ ೨೦೧೪ ರಲ್ಲಿ ನಿವೃತ್ತರಾದ ನಂತರ ಬಿಜೆಪಿ.ಗೆ ಸೇರಿಕೊಂಡು ಸಕ್ರಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡ ಇವರ ಸೇವೆಯನ್ನು ಗುರುತಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ನಲವತ್ತಕ್ಕೂ ಹೆಚ್ಚು ಸಾಹಿತ್ಯ, ಇತಿಹಾಸ, ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿರುವ ಹರ್ತಿಕೋಟೆ ವೀರೇಂದ್ರ ಸಿಂಹ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಪಟ್ಟಣ ಪಂಚಾಯಿತಿ ಮೀಸಲಾತಿ ಹೆಚ್ಚುವರಿಗಾಗಿ ನಡೆದ ಹೋರಾಟದಲ್ಲಿ ವಾಲ್ಮೀಕಿ ಶ್ರೀಗಳೊಂದಿಗೆ ಹದಿನಾರು ದಿನಗಳ ಕಾಲ ನಿರಂತರವಾಗಿ ನಡೆದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು. ಇವರ ಸಂಘಟನಾ ಚುತರತೆಯನ್ನು ಕಂಡ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss