Friday, July 1, 2022

Latest Posts

ಬಿಜೆಪಿ ಬಳ್ಳಾರಿ ಜಿಲ್ಲಾ ಕಾರ್ಯಾಲಯದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

ಬಳ್ಳಾರಿ: ನಗರದ ಸಂಗನಕಲ್ಲು ರಸ್ತೆಯ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಬಿಜೆಪಿ ನೂತನ ಜಿಲ್ಲಾ‌ ಕಾರ್ಯಾಲಯದ ಕಟ್ಟಡ ಕಾಮಗಾರಿಗೆ ವಿವಿಧ ಗಣ್ಯರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ಶಿಲಾನ್ಯಾಸ ಹಿನ್ನೆಲೆ ಬೆಳಿಗ್ಗೆ ವಿಶೇಷ ಪೂಜೆ, ಅರ್ಚನೆ, ಹೊಮ ಹವನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು. ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ, ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಗಾಲಿ ಸೋಮಶೇಖರ ರೆಡ್ಡಿ, ಕರುಣಾಕರ ರೆಡ್ಡಿ, ಮಾಜಿ ಶಾಸಕರಾದ ನೇಮಿರಾಜ್ ನಾಯ್ಕ್, ಬೂಡಾ ಅದ್ಯಕ್ಷ ದಮ್ಮೂರ್ ಶೇಖರ್, ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕವಿತಾ ಸಿಂಗ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನವೀನ್, ಎಸ್ಸಿ ಮೋರ್ಚಾದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಚ್.ಹನುಮಂತಪ್ಪ, ಮುಂಡರಾದ ಎಸ್.ಗುರುಲಿಂಗನಗೌಡ, ಡಾ.ಮಹಿಪಾಲ್, ಓದೋ ಗಂಗಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಐನಾಥ ರೆಡ್ಡಿ, ಅನಿಲ್ ನಾಯ್ಡು, ಮುರಾಹರಗೌಡ, ಕೆ.ರಾಮಲಿಂಗಪ್ಪ, ಸಾಕಲ್ ಚಾಂದ್ ಬಾಗ್ರೆಚಾ, ಮೋತ್ಕರ್ ಶ್ರೀನಿವಾಸ್, ವೀರಶೇಖರ ರೆಡ್ಡಿ, ಮಲ್ಲನಗೌಡ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss