Saturday, June 25, 2022

Latest Posts

ಬಿಜೆಪಿ ಮಂಜೇಶ್ವರ ಮಂಡಲ ವ್ಯಾಪ್ತಿಯ ಕಾರ್ಯಕರ್ತರ ಅಭ್ಯಾಸ ವರ್ಗ ಉದ್ಘಾಟನೆ

ಹೊಸದಿಗಂತ ವರದಿ,ಕಾಸರಗೋಡು:

ಕೇರಳದಲ್ಲಿ ಬಿಜೆಪಿಯು ರಾಜಕೀಯವಾಗಿ ಬಲಿಷ್ಠಗೊಳ್ಳುತ್ತಿದೆ. ಅಲ್ಲದೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜನತೆಯ ಆಶೀರ್ವಾದದೊಂದಿಗೆ ಎನ್ ಡಿಎ ಮೈತ್ರಿಕೂಟವು ಅಧಿಕಾರಕ್ಕೇರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯ ಸಿ.ಕೆ.ಪದ್ಮನಾಭನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೊಸಂಗಡಿ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯ ಆಶ್ರಯದಲ್ಲಿ ಬಿಜೆಪಿ ಕಾರ್ಯಕರ್ತರ ಎರಡು ದಿನಗಳ ಅಭ್ಯಾಸ ವರ್ಗವನ್ನು ಗುರುವಾರ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಕೇರಳದ ಪಿಣರಾಯಿ ವಿಜಯನ್ ಸರಕಾರವು ಜನರ ತೆರಿಗೆ ಹಣವನ್ನೇ ಕೊಳ್ಳೆ ಹೊಡೆಯುತ್ತಿದೆ. ಹಗರಣಗಳ ಜೊತೆ ಮುಖ್ಯಮಂತ್ರಿಯ ಪರ್ಸನಲ್ ಕಾರ್ಯದರ್ಶಿಯೇ ಜೈಲಿಗೆ ಹೋಗುವಂತಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಮಣಿಕಂಠ ರೈ ಪಟ್ಲ ವಹಿಸಿದ್ದರು. ಬಿಜೆಪಿ ಉತ್ತರ ವಲಯ ಉಪಾಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ ಧ್ವಜಾರೋಹಣಗೈದರು.

ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ , ನ್ಯಾಯವಾದಿ ಕೆ.ಶ್ರೀಕಾಂತ್, ನೇತಾರರಾದ ನ್ಯಾಯವಾದಿ ಎ.ಸದಾನಂದ ರೈ , ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ , ಸರೋಜಾ ಆರ್.ಬಲ್ಲಾಳ್, ಎ.ಕೆ.ಕಯ್ಯಾರು, ವಿಜಯಕುಮಾರ್ ರೈ ಪರಂಕಿಲ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಆದರ್ಶ್ ಬಿ.ಎಂ. ಸ್ವಾಗತಿಸಿ, ಮುರಳೀಧರ ಯಾದವ್ ಕಾರ್ಯಕ್ರಮ ನಿರೂಪಿಸಿದರು. ಪದ್ಮನಾಭ ಕಡಪ್ಪರ ವಂದಿಸಿದರು. ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಮಂಜೇಶ್ವರ ಮಂಡಲದ ಜಿಲ್ಲಾ , ಬ್ಲಾಕ್, ಗ್ರಾಮ ಪಂಚಾಯತ್ ಗಳ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದು, ಗುರುವಾರ ಹಾಗೂ ಶುಕ್ರವಾರ ನಡೆಯುವ ಕಾರ್ಯಕರ್ತರ ಅಭ್ಯಾಸ ವರ್ಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss