ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಿಜೆಪಿ ಮುಖಂಡ ಜುಲ್ಫಿಕರ್ ಖುರೇಷಿ ಅವರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಸೋಮವಾರ ಈಶಾನ್ಯ ದೆಹಲಿಯಲ್ಲಿ ನಡೆದಿದೆ.
ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಸೀದಿಯ ಹೊರಗೆ ಇದ್ದ ಖುರೇಷಿ ಅವರ ತಲೆಗೆ ಗುಂಡು ಹಾರಿಸಲಾಗಿದ್ದು, ಅವರ ಜೊತೆಗಿದ್ದ ಮಗನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಭೀಕರ ಘಟನೆ ನಡೆದಿದೆ.
ಖುರೇಷಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತರನ್ನು ಬಂಧಿಸಲು ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.