Monday, August 8, 2022

Latest Posts

ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳ ಘೋಷಣೆ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ
ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ 
ಸಚಿವ ಸಿಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.
ಉತ್ತಮ ವಾಕ್ಚಾತುರ್ಯದಿಂದ ದೇಶದ ಗಮನ ಸೆಳೆದಿರುವ ಯುವ ಸಂಸದ ತೇಜಸ್ವಿ ಸೂರ್ಯ ಅವರು ಹೊಸ ಜವಾಬ್ದಾರಿಯ ಮೂಲಕ ರಾಷ್ಟ್ರರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳಲಿದ್ದಾರೆ.
ಒಬಿಸಿ ಮೋರ್ಚಾದ ಅಧ್ಯಕ್ಷರಾಗಿ ತೆಲಂಗಾಣದ ಡಾ.ಕೆ. ಲಕ್ಷ್ಮಣ್ ಹಾಗೂ ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ.ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss