ಮೈಸೂರು: ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಸಕ ಎಲ್. ನಾಗೇಂದ್ರ ನೇತೃತ್ವದಲ್ಲಿ ವಿಜಯನಗರ ವಾರ್ಡಿನ ಅನಂತ ಗೀತಾ ಶಾಲೆಯ ಎದುರು ರಸ್ತೆಯಲ್ಲಿ “೫೦”ಸಸಿ ನೆಟ್ಟು, ಸಿಹಿ ಹಂಚಿಕೆ ಮಾಡುವ ಮೂಲಕ ಅರ್ಥ ಪೂರ್ಣವಾಗಿ ೭೪ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ನಗರಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯರವರು, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ ರವರು,ಚಾಮರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್. ಆರ್, ಚಾಮರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪುನೀತ್, ರಮೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.