Sunday, August 14, 2022

Latest Posts

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ರಿಂದ ಉತ್ತಮ ಸಂಘಟನಾ ತಂಡದ ರಚನೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು, ಯುವಕರು, ಹಿರಿಯರು, ಅನುಭವಿಗಳು ಸೇರಿದಂತೆ ಉತ್ತಮವಾದ ಸಂಘಟನಾ ತಂಡವನ್ನು ರಚನೆ ಮಾಡಿದ್ದಾರೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್‌ರು ಪಕ್ಷ ಸಂಘಟನೆ ದೃಷ್ಟಿಯಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡ ಜನಪರ ಯೋಜನೆಗಳನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ, ಉತ್ತಮವಾದ ಸಂಘಟನಾ ತಂಡವನ್ನು ರಚನೆ ಮಾಡಿದ್ದಾರೆ. ಪಕ್ಷದ ಸಂಘಟನೆಗೆ ಸದೃಢ ಮತ್ತು ಕ್ರಿಯಾಶೀಲ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಎಲ್ಲರಿಗೂ ಕೂಡ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪ್ರವಾಹ, ಕೋವಿಡ್ ೧೯ ನಿರ್ವಹಣೆಯಲ್ಲಿ ೨೪x೭ ಉಸ್ತುವಾರಿ ಸಚಿವರುಗಳಿಗೆ, ಜನಪ್ರತಿನಿಧಿಗಳಿಗೆ, ಜಿಲ್ಲಾಡಳಿತಕ್ಕೆ ಸಲಹೆ ಸೂಚನೆಗಳು, ಮಾರ್ಗದರ್ಶನ ನೀಡುತ್ತಾ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದರೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಜೊತೆಗೆ ಕಷ್ಟದಲ್ಲಿರುವ ನಾಗರಿಕರ ಸಹಾಯಕ್ಕೆ ಧಾವಿಸಿ ಕೋಟ್ಯಂತರ ರೂಪಾಯಿ ಪ್ಯಾಕೇಜ್ ಗಳನ್ನು ಘೋಷಿಸಿ ನೆರವಾಗಿದ್ದಾರೆ. ಈ ಮೂಲಕ ಆರ್ಥಿಕ ಚಟುವಟಿಕೆ ನಿಲ್ಲದಂತೆ ನೋಡಿಕೊಂಡು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ.
ಆದರೆ ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿರುವ ವಿಪಕ್ಷಗಳಿಗೆ ನೂತನ ಪದಾಧಿಕಾರಿಗಳು ಪಕ್ಷದ ವೇದಿಕೆಯಲ್ಲಿ ತಕ್ಕ ಮತ್ತು ಸಮರ್ಥ ರೀತಿಯಲ್ಲಿ ಉತ್ತರವನ್ನು ಕೊಡುವ ನಿಟ್ಟಿನಲ್ಲಿ ಅರ್ಹರನ್ನು ನೇಮಕ ಮಾಡಿಕೊಳ್ಳಲಾಗಿದೆ. ವ್ಯಕ್ತಿ ಪೂಜೆಗಿಂತ ಪಕ್ಷದ ಪೂಜೆ ಮುಖ್ಯ ಎಂಬ ನಿಟ್ಟಿನಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ರಚನೆಯಾಗಲು, ಪಕ್ಷದ ತಂಡದೊAದಿಗೆ ನಾವೆಲ್ಲ ಸಚಿವರು ಕಾರ್ಯನಿರ್ವಹಿಸುತ್ತೇವೆಂದು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss