Wednesday, August 17, 2022

Latest Posts

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಕೊರೋನಾ ಹಿನ್ನೆಲೆ ಕ್ವಾರೆಂಟೀನ್ ಆಗಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದು, ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದ್ದು, ಯಾವ ರೋಗ ಲಕ್ಷಣಗಳೂ ಇಲ್ಲ. ವೈದ್ಯರ ಸಲಹೆಯಂತೆ ಕ್ವಾರೆಂಟೀನ್ ಆಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿ ಎಂದು ವಿನಂತಿಸಿಕೊಂಡಿದ್ದಾರೆ. ಈ ಕುರಿತು ಸಚಿವ ಶ್ರೀರಾಮುಲು ಕೂಡ ಟ್ವೀಟ್ ಮಾಡಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!