ಹೊಸ ದಿಗಂತ ವರದಿ, ಮಂಗಳೂರು:
ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೊದಲಾದವರು ಅವರನ್ನು ಸ್ವಾಗತಿಸಿದರು.