Wednesday, August 17, 2022

Latest Posts

ಬಿಜೆಪಿ ಸಂಸದ ಗೌತಮ್ ಗಂಭೀರ್ ಕೊರೋನಾ ಪರೀಕ್ಷಾ ವರದಿ ನೆಗೆಟಿವ್

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಮಾಜಿ ಕ್ರಿಕೆಟಿಗ , ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರ ಮನೆಯಲ್ಲಿನ ಸದಸ್ಯರೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಅವರು ಇತ್ತೀಚಿಗೆ ಸ್ವಯಂ ಐಸೋಲೇಷನ್ ಆಗಿದ್ದರು. ಇಂತಹ ಗೌತಮ್ ಗಂಭೀರ್ ಈಗ ಕೊರೋನಾ ಸೋಂಕಿನ ಪರೀಕ್ಷೆಗೆ ಒಳಗಾಗಿದ್ದು, ಅವರ ಕೋವಿಡ್-19 ವರದಿಯು ನೆಗೆಟಿವ್ ಎಂಬುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ನಾನು ನಿಮ್ಮೆಲ್ಲರಿಗೂ ತಿಳಿಯ ಬಯಸುವುದೇನೆಂದರೇ, ನನ್ನ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು, ನನಗೆ ಕೋವಿಡ್-19 ನೆಗೆಟಿವ್ ಎಂಬುದಾಗಿ ತಿಳಿದು ಬಂದಿದೆ. ನಿಮ್ಮೆಲ್ಲರ ಹಾರೈಕೆ, ಆರ್ಶೀರ್ವಾದಕ್ಕೆ ಧನ್ಯವಾದಗಳು ಎಂಬುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!