Thursday, August 11, 2022

Latest Posts

ಬಿಜೆಪಿ ಸರ್ಕಾರದಿಂದ ಅಭಿವೃದ್ಧಿ ಶೂನ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಬೇಸರ

ಬಳ್ಳಾರಿ: ಬಿಜೆಪಿ ಅವರ ಸರ್ವಾಧಿಕಾರಿ ಧೋರಣೆಯಿಂದ ಅಭಿವೃದ್ಧಿ ಶೂನ್ಯ ಎಂದು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದರು.
ಹೊಸಪೇಟೆ ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶದ ಹತ್ರಾಸ್ ನಲ್ಲಿ​ ದಲಿತ ಯುವತಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಅಲ್ಲದೇ, ಕುಟುಂಬದವರ ಅನುಮತಿ ಇಲ್ಲದೆಯೇ ರಾತ್ರೋ ರಾತ್ರಿ‌ ಪೊಲೀಸರು ಮೃತದೇಹವನ್ನು ದಹಿಸಿದ್ದಾರೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರ ಭೇಟಿ ಪಡಾವೋ, ಭೇಟಿ ಬಚಾವೋ ಯೋಜನೆ ಸ್ಲೋಗನ್ ಗೆ ಮಾತ್ರ ಸಿಮೀತವಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ.ಬಿಜೆಪಿ ಸರಕಾರದ ಅವಧಿಯಲ್ಲಿ ಮಹಿಳೆಯರನ್ನು ರಕ್ಷಣೆ ಮಾಡುವಂತಹ ಪರಿಸ್ಥಿತಿ ಬಂದಿದೆ. ಮಹಿಳೆ ದೂರು‌ ನೀಡಿದರೂ ಸಹ ಒಂದು ವಾರದ ಬಳಿಕ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉತ್ತರಪ್ರದೇಶದಲ್ಲಿ ಯುವತಿ ಕುಟುಂಬಕ್ಕೆ ಸ್ವಾಂತನ‌ ಹೇಳಲು ತೆರಳಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ‌ ಹಾಗೂ ಪ್ರಿಯಾಂಕ ವಾದ್ರಾ ಅವರನ್ನು ತಡೆಯಲಾಗಿದೆ. ಅಲ್ಲದೇ, ರಾಹುಲ್ ಗಾಂಧಿ ಮೇಲೆ ಹಲ್ಲೆ ಮಾಡಿ ಅವರನ್ನು ಬಂಧಿಸಿದ್ದಾರೆ ಎಂದರು. ಬಿಜೆಪಿಯವರು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಅವರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗುತ್ತಿದೆ. ತಕ್ಷಣ ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಅವರು ಯೋಗಿ ಆದಿತ್ಯನಾಥರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss