spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಿಜೆಪಿ ಸಾಧನೆ ಕಂಡು ಕಾಂಗ್ರೆಸ್ ಕಂಗಾಲಾಗಿದೆ: ಸಚಿವ ಜಗದೀಶ ಶೆಟ್ಟರ್

- Advertisement -Nitte

ಹೊಸದಿಗಂತ ವರದಿ,ಯಾದಗಿರಿ:

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಾಧನೆ ಕಂಡ ಕಾಂಗ್ರೆಸ್ ಪಕ್ಷ ಕಂಗಾಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಅವರು ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಜನಸೇವಕ ಹಾಗೂ ಚುನಾಯಿತ ಗ್ರಾಮ ಪಂಚಾಯತ ಸದಸ್ಯರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇ. 50 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಿದೆ. ಈ ಜಯ ಪಕ್ಷದ ದಾಖಲೆಯಾಗಿದೆ. ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷ ಭವಿಷ್ಯದ ಬಗ್ಗೆ ಚಿಂತನ ಮಾಡುವಂತಾಗಿದೆ ಎಂದರು. ರಾಹುಲ ಗಾಂಧಿಯವರನ್ನು ಕಾಂಗ್ರೆಸ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಅದೇ ಪಕ್ಷದ 17 ಕ್ಕೂ ಹೆಚ್ಚು ಮುಖಂಡರು ವಿರೋಧ ವ್ಯಕ್ತಪಡಿಸಿತ್ತಿದ್ದಾರೆ. ಅವರನ್ನು ಅದ್ಯಕ್ಷರನ್ನಾಗಿ ಮಾಡಿದರೆ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತದೆ ಎಂದು ಹೇಳಿದ್ದಾರೆ. ಇಂತಹ ಪಕ್ಷವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಇನ್ನೂ ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯನವರ ಮಧ್ಯೆ ಮುಂದಿನ ಮುಖ್ಯಮಂತ್ರಿಯಾಗಲು ಫೈಟ ನಡೆಸಿದ್ದಾರೆ. ಅವರು ಪಕ್ಷದ ಸಂಘಟನೆಗಿoತ ಅಧಿಕಾರ ಹೇಗೆ ಹಿಡಿಯಬೇಕು ಎಂಬುದೇ ಮುಖ್ಯ ಉದ್ದೇಶ ಮಾಡಿಕೊಂಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಒಂದೆ ಸರಕಾರ ಇರುವುದರಿಂದ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬರಲಿದೆ. ಅದಕ್ಕಾಗಿ ಚುನಾಯಿತ ಸದಸ್ಯರು ತಮ್ಮ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ, ಜನತೆಯ ವಿಶ್ವಾಸ ಉಳಿಸಿಕೊಳ್ಳಲು ಮನವಿ ಮಾಡಿದರು.

ಗ್ರಾಮ ಸ್ವರಾಜ ಮಾಡುವ ಮೂಲಕ ಗ್ರಾಮ ಪಂಚಾಯತಿಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಈಗ ಜನಸೇವಕ ಕಾರ್ಯಕ್ರಮಗಳ ಮೂಲಕ ಬರುವ ದಿನಗಳಲ್ಲಿ ತಾಪಂ ಮತ್ತು ಜಿಪಂ ಗೆಲವು ಸಾಧಿಸುವ ಉದ್ದೇಶ ರಾಜ್ಯ ಅಧ್ಯಕ್ಷರದಾಗಿದೆ. ಕಾರ್ಯಕರ್ತರನ್ನೆ ಆಸ್ತಿ ಎಂದು ತಿಳಿದಿರುವ ನಮ್ಮ ಪಕ್ಷ ಸದಾ ತಮ್ಮ ಜೊತೆಗಿದ್ದು ಗ್ರಾಮ ವಿಕಾಸಕ್ಕಾಗಿ ಕೈಜೋಡಿಸುತ್ತೇವೆ ಎಂದು ಭರವಸೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಶರಣಭೂಪಾಲರೆಡ್ಡಿ ನಾಯ್ಕಲ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕಲಬುರಗಿ ಸಂಸದ ಉಮೇಶ ಜಾಧವ, ಮಾಜಿ ಶಾಸಕ ಬಾಬುರಾವ ಚಿಂಚನಸೂರು, ಶಾಸಕರಾದ ರಾಜುಗೌಡರು, ರಾಜ್ಯ ಬಿಜೆಪಿ ಯುವ ಅಧ್ಯಕ್ಷ ಮಹೇಶ ಟೆಂಗಿನಕಾಯಿ ಮಾತನಾಡಿದರು. ಶಾಸಕ ವೆಂಕಟರೆಡ್ಡಿ ಮುದ್ನಾಳ, ವಿಧಾನ ಪರಿಷತ ಸದಸ್ಯ ಬಿ.ಜಿ.ಪಾಟೀಲ್, ಮಾಜಿ ಶಾಸಕ ಡಾ. ವೀರಬಸವಂತರೆಡ್ಡಿ ಮುದ್ನಾಳ ಸೇರಿದಂತೆ ಇತರ ಮುಖಂರು ಭಾಗವಹಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss