Monday, January 12, 2026

ಬಿಬಿಎಂಪಿಯ ಅಭಿಯಾನದ ಎಫೆಕ್ಟ್‌: ಡೆಂಗ್ಯೂ ಪ್ರಕರಣಗಳು ಶೇ.75ರಷ್ಟು ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡೆಂಗ್ಯೂ ನಿಯಂತ್ರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸಿದ ನಿರಂತರ ಪ್ರಯತ್ನಗಳು ಫಲ ನೀಡಿದ್ದು, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.

ಜನವರಿ 1 ರಿಂದ ಜುಲೈ 23 ರವರೆಗೆ ನಗರದಲ್ಲಿ ಕೇವಲ 1,676 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 7,280 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು.

ಡೆಂಗ್ಯೂ ಪ್ರಕರಣಗಳ ಸಂಖ್ಯೆಯನ್ನು ನಿಗ್ರಹಿಸಲು ಆರೋಗ್ಯ ಅಧಿಕಾರಿಗಳು ಹೆಚ್ಚಿನ ಜಾಗರೂಕತೆ ವಹಿಸಿದ್ದು, ಇದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಪಾಸಿಟಿವ್ ಪ್ರಕರಣಗಳಲ್ಲಿ ಶೇಕಡಾ 75ರಷ್ಟು ಇಳಿಕೆ ಕಂಡುಬಂದಿದೆ. ಇದಲ್ಲದೆ, ಡೆಂಗ್ಯೂವಿನಿಂದಾಗಿ ಯಾವುದೇ ಸಾವುಗಳೂ ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ.

ಅಂಕಿ ಅಂಶಗಳ ಪ್ರಕಾರ, 2022 ರಲ್ಲಿ 2,313 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದಾರೆ. 2023 ರಲ್ಲಿ ನಾಲ್ಕು ಸಾವುಗಳೊಂದಿಗೆ 8,609 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು. 2024 ರಲ್ಲಿ ಸಕಾರಾತ್ಮಕ ಪ್ರಕರಣಗಳು ಬಹುತೇಕ ದ್ವಿಗುಣಗೊಂಡಿದ್ದವು. ಇದಲ್ಲದೆ, ಮೂರು ಸಾವುಗಳೊಂದಿಗೆ 14,950 ಪ್ರಕರಣಗಳು ಪತ್ತೆಯಾಗಿದ್ದವು. ಬಳಿಕ ಪ್ರಕರಣಗಳನ್ನು ಕಡಿಮೆ ಮಾಡಲು ಬಿಬಿಎಂಪಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು.

Related articles

Comments

LEAVE A REPLY

Please enter your comment!
Please enter your name here

ಇತರರಿಗೂ ಹಂಚಿ

Latest articles

Newsletter

error: Content is protected !!