Saturday, July 2, 2022

Latest Posts

ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ವರ್ಗಾವಣೆ: ನೂತನ ಆಯುಕ್ತರಾಗಿ ಎನ್. ಮಂಜುನಾಥ್ ಪ್ರಸಾದ್ ನೇಮಕ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

ಬಿಬಿಎಂಪಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎನ್. ಮಂಜುನಾಥ್ ಪ್ರಸಾದ್ ರನ್ನು ನೂತನ ಆಯುಕ್ತರಾಗಿ ನೇಮಿಸಲಾಗಿದೆ. ಅನಿಲ್ ಕುಮಾರ್ ಅವರಿಗೆ ಸಾರ್ವಜನಿಕ ಉದ್ದಿಮೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಶುಕ್ರವಾರ ಅನಿಲ್ ಕುಮಾರ್ ಅವರು ಬೆಂಗಳೂರಿನಲ್ಲಿ ಕೊರೋನಾ ಸೋಂಕನ್ನು ನಿಯಂತ್ರಣಕ್ಕೆ ತರಲು ಲಾಕ್ ಡೌನ್ ನನ್ನು ಮುಂದುವರೆಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ರಾಜ್ಯ ಸರ್ಕಾರ ಲಾಕ್ ಡೌನ್ ವಿಸ್ತರಣೆಯ ಯಾವುದೇ ಆಲೋಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss