ಬೆಂಗಳೂರು: ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಳೂರಿನ ಜಂಟಿ ಕಾರ್ಯದರ್ಶಿ ಸ್ನೇಹಶಿಶ್ ಗಂಗೂಲಿ ಅವರಿಗೆ ಕೊರೋನಾ ದೃಢಪಟ್ಟಿದೆ. ಈ ಹಿನ್ನಲೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇದೀಗ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.
ಕೊರೋನಾ ಸೋಂಕು ಪಾಸಿಟಿವ್ ಬಂದ ಬಳಿಕ ಸ್ನೇಹಶಿಶ್ ಅವರನ್ನು ಇದೀಗ ಬಿಲ್ಲೆ ವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು, ಕೊರೋನಾ ದೃಢಪಟ್ಟ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಎಬಿ ಅಧಿಕಾರಿಗಳು ತಿಳಿಸಿದರು.
ಆರೋಗ್ಯ ಇಲಾಖೆಯ ಸೂಚನೆಯಂತೆ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿಸಿದೆ.