Monday, July 4, 2022

Latest Posts

ಬಿಹಾರದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು: ತಪ್ಪಿದ ಅನಾಹುತ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಿಹಾರದ ಚಪ್ರಾ ಜಂಕ್ಷನ್ ರೈಲು ನಿಲ್ದಾಣದ ಬಳಿ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದೆ.
ಇಂದು ಸಂಜೆ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಚಪ್ರಾ ಕೋರ್ಟ್ ನಿಲ್ದಾಣದಿಂದ ಚಪ್ರಾ ಜಂಕ್ಷನ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ 65 ನೇ ಕ್ರಾಸಿಂಗ್ ಬಳಿ ಹಳಿ ತಪ್ಪಿದೆ. ಈಗಾಗಲೇ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಘಟನಾ ಸ್ಥಳದಲ್ಲಿ ಸಂಚರಿಸುವ ರೈಲುಗಳ ಮಾರ್ಗ ಬದಲಾಯಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss