ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಿಹಾರ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಯು-ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಕ್ಕಿದ್ದು, ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿ ಗಾದಿಗೇರಲಿದ್ದಾರೆ. ಇದರ ಬೆನ್ನಲ್ಲೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರ್ಜೆಡಿ ಆರೋಪಿಸಿದೆ.
ಬಿಹಾರ ರಾಜಧಾನಿ ಪಟನಾದಲ್ಲಿರುವ ಚುನಾವಣಾ ಆಯೋಗಕ್ಕೆ ಆರ್ಜೆಡಿ ಮತ್ತು ಕಾಂಗ್ರೆಸ್ ನಾಯಕರನ್ನು ಒಳಗೊಂಡ ನಿಯೋಗವೊಂದು ತೆರಳಿ ದೂರು ಸಲ್ಲಿಸಿದೆ. ಆಡಳಿತಾರೂಢ ಎನ್ಡಿಎ ಒತ್ತಾಯದ ಮೇರೆಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದೆ.
ಚುನಾವಣಾ ಆಯೋಗ ದೂರನ್ನು ಸ್ವೀಕರಿಸಿದ್ದು, ಆದರೆ ಮತ ಎಣಿಕೆಯಲ್ಲಿ ಅಕ್ರಮ ನಡೆದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿತ್ತು.
ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗುತ್ತಿದೆ. ‘ಬಿಹಾರ ಚುನಾವಣೆಯಲ್ಲಿ ನಾವು ಎಷ್ಟು ಫೋರ್ಜರಿಯನ್ನು ನೋಡಬೇಕು? ಕಿಶನ್ಗಂಜ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,266 ಮತಗಳಿಂದ ಜಯಗಳಿಸಿದ್ದಾರೆ. ಆದರೂ ಅವರಿಗೆ ಗೆಲುವಿನ ಪ್ರಮಾಣಪತ್ರ ನೀಡಿಲ್ಲ. ಜನರ ತೀರ್ಪನ್ನು ಅಪಹರಿಸಲಾಗುತ್ತಿದೆ’ ಎಂದು ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.