Sunday, August 14, 2022

Latest Posts

ಬಿಹಾರ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ

ಹೊಸದಿಗಂತ ಆನ್ ಲೈನ್ ಡೆಸ್ಕ್

ಬಿಹಾರ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಪ್ರಾರಂಭವಾಗಿದೆ.ರಾಜ್ಯದ 15 ಜಿಲ್ಲೆಗಳಲ್ಲಿರುವ ಈ ವಿಧಾನಸಭಾ ಕ್ಷೇತ್ರಗಳ 33,782 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಇಂದು78 ಕ್ಷೇತ್ರಗಳಲ್ಲಿ ಮತದಾನವಾಗಲಿದ್ದು, 2.35 ಕೋಟಿ ಜನ ಮತ ಚಲಾಯಿಸಲಿದ್ದಾರೆ. ಮೂರನೇ ಹಂತದ ಚುನಾವಣೆಯ ಕಣದಲ್ಲಿ ಒಟ್ಟು 1204 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಭವಿಷ್ಯ ನಿರ್ಧಾರವಾಗಲಿದೆ.

78 ಕ್ಷೇತ್ರಗಳಲ್ಲಿ ಆರ್​ಜೆಡಿ 46 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, 42 ಕ್ಷೇತ್ರಗಳಲ್ಲಿ ಲೋಕಜನಶಕ್ತಿ ಪಕ್ಷ, 37ರಲ್ಲಿ ಜೆಡಿಯು, 35ರಲ್ಲಿ ಬಿಜೆಪಿ, 31ರಲ್ಲಿ ಎನ್​ಸಿಪಿ, 25ರಲ್ಲಿ ಕಾಂಗ್ರೆಸ್, 23ರಲ್ಲಿ ರಾಷ್ಟ್ರೀಯ ಲೋಕ ಸಮತಾ ಪಕ್ಷ, 19ರಲ್ಲಿ ಬಹುಜನ ಸಮಾಜವಾದಿ ಪಕ್ಷ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಎಲ್ಲ ಕಡೆ ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಅಳವಡಿಸಲಾಗಿದ್ದು, ಇದುವರೆಗೆ ಯಾವುದೇ ಅಡ್ಡಿ ಆತಂಕ ಎದುರಾಗಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss